ಮಂಗಳೂರು ಕಾವೂರು ಪೊಲೀಸ್ ಠಾಣಾ ಅ.ಕ್ರ: 178/2016 ಕಲಂ: 399, 402 ಐ.ಪಿ.ಸಿ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ವಿಶಾಲ್ ಕುಮಾರ್ (26), ತಂದೆ: ಜಗದೀಶ್ ಸುವರ್ಣ, ವಾಸ: ಲತಾ ನಿಲಯ, ದೇವೀ ನಗರ, ಕೆ.ಹೆಚ್.ಬಿ ಕಾಲೋನಿ, ಕಾವೂರು, ಮಂಗಳೂರು ಎಂಬಾತನು ಸುಮಾರು 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
2022ರಿಂದ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಲಯವು ಆರೋಪಿಯ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಈತನ ದುಬೈ ಪ್ರವಾಸದ ಬಗ್ಗೆ ಖಚಿತ ಮಾಹಿತಿ ದೊರೆತ ಕಾರಣದಿಂದ, ಇವನ ವಿರುದ್ಧ ಲುಕ್ ಔಟ್ ಸರ್ಕ್ಯುಲರ್ (LOC) ಕೂಡ ಹೊರಡಿಸಲಾಗಿತ್ತು.
ನಿನ್ನೆ (04-09-2025) ದಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ, ಬ್ಯೂರೋ ಆಫ್ ಇಮಿಗ್ರೇಶನ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು, ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಒಪ್ಪಿಸಿದರು.
ಇಂದು ಆರೋಪಿಯನ್ನು ಮಾನ್ಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು 18-09-2025 ರವರೆಗೆ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದೆ.
ಇದೇ ವೇಳೆ, 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಾರಣದಿಂದ ಆರೋಪಿಯ ವಿರುದ್ಧ ಕಾವೂರು ಪೊಲೀಸ್ ಠಾಣಾ ಅ.ಕ್ರ: 133/2025 ಕಲಂ: 269 ಬಿ.ಎನ್.ಎಸ್ ಅನ್ವಯ ಹೊಸ ಪ್ರಕರಣವನ್ನು ಸಹ ದಾಖಲಿಸಲಾಗಿದೆ.
ಮತ್ತೊಂದು ಪ್ರಕರಣವು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿಯೂ ಕೂಡ ಆರೋಪಿಯ ವಿರುದ್ಧ ದಾಖಲಾಗಿರುವುದಾಗಿ ತಿಳಿದುಬಂದಿದೆ.
Post a Comment