ಸುಳ್ಯ:ಸುಳ್ಯ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಪೋಲೀಸ್ ಠಾಣಾ ಕ್ರಿ.ಸಂ. 115/2018ರಲ್ಲಿ ಕಲಂ 504, 354(a) ಐಪಿಸಿ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿ ರವೀಂದ್ರ ಬಿ.ಎನ್ (40) ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದರ ಹಿನ್ನೆಲೆಯಲ್ಲಿ LPC No.04/2023ರಂತೆ ವಾರೆಂಟ್ ಹೊರಡಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ತನಿಖೆ ನಡೆಸಿ, ದಿನಾಂಕ 07-09-2025 ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರದಲ್ಲಿ ಆರೋಪಿ ರವೀಂದ್ರನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Post a Comment