7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ.

ವಿಟ್ಲ:ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅಪರಾಧ ಕ್ರ. 219/2018, ಐಪಿಸಿ ಕಲಂ 269, 270, 278ರಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಅಹ್ಮದ್ ಗಜನಿ (39), ಕ್ಯಾಲಿಕಟ್ ಜಿಲ್ಲೆ, ಕೇರಳ ರಾಜ್ಯದ ನಿವಾಸಿ, ಸುಮಾರು 7 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಈ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ, 16/09/2025 ರಂದು ಕ್ಯಾಲಿಕಟ್‌ನ Ferok ರಿಕ್ಷಾ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದರು.

ಬಂಧಿತನನ್ನು ನಂತರ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೂಕ್ತ ಜಾಮೀನಿನಲ್ಲಿ ಆರೋಪಿಯನ್ನು ಬಿಡುಗಡೆ ಮಾಡಿದೆ.

Post a Comment

Previous Post Next Post