ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಸಲ್ಪಡುವ ಕೆ.ಎಸ್.ಎಸ್ ಕಾಲೇಜಿನಲ್ಲಿ ಸ್ಥಳೀಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಿ.ಎಸ್.ಸಿ ಪದವಿ ಪ್ರಾರಂಭಿಸುವಂತೆ ಮನವಿ ಸಲ್ಲಿಸಲಾಯಿತು.
ಈ ಸಂಬಂಧ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಮತ್ತು ಸದಸ್ಯರ ಮಾರ್ಗದರ್ಶನದಲ್ಲಿ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ನಾಯರ್ ಹಾಗೂ ಶಿಕ್ಷಕ ರಕ್ಷಕ ಸಂಘದ ನಿರ್ದೇಶಕ ಶಿವರಾಮ ರೈ ಅವರ ನೇತೃತ್ವದಲ್ಲಿ ಮಾನ್ಯ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಮತ್ತು ಮುಜರಾಯಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಸಚಿವರು ಹಾಗೂ ಆಯುಕ್ತರು, ಮುಂದಿನ ಶೈಕ್ಷಣಿಕ ವರ್ಷದಲ್ಲೇ ಬಿ.ಎಸ್.ಸಿ ಪದವಿ ಆರಂಭಿಸುವ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮನವಿಗೆ ಸ್ಪಂದಿಸಿದಕ್ಕಾಗಿ ಸಂಘದ ವತಿಯಿಂದ ಸಚಿವರಿಗೆ ಹಾಗೂ ಆಯುಕ್ತರಿಗೆ ಧನ್ಯವಾದಗಳು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಕ್ತನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ತೇಜಸ್ ಕಳಿಗೆ, ಪವನ್ ಎಂ.ಡಿ, ಪ್ರದೀಪ್ ಕಳಿಗೆ, ದಿನೇಶ್ ಮಲ್ಲಿಗೆಮಜಲು, ನಿತಿನ್ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Post a Comment