ನೂಜಿಬಾಳ್ತಿಲ;ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ಪುನೀತ್ ಕೆ ಅವರು ವಿಶ್ವ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ತಾಂತ್ರಿಕ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.
ಭಾರತದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದ ಆಶ್ರಯದಲ್ಲಿ ನಡೆಯಲಿರುವ ಈ ಮಹತ್ವದ ಕ್ರೀಡಾಕೂಟವು ನವದೆಹಲಿಯ ಜವಾಹರ್ ಲಾಲ್ ನೆಹರು ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 5 ರವರೆಗೆ ಜರುಗಲಿದೆ.
ಈ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವಂತೆ ಆಯ್ಕೆಯಾದ ಶ್ರೀ ಪುನೀತ್ ಕೆ ಅವರ ಸಾಧನೆ ಸಂಸ್ಥೆಗೂ ಹಾಗೂ ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೂ ಹೆಮ್ಮೆ ತಂದುಕೊಟ್ಟಿದೆ.
ಇವರು ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರ ಶ್ರಮ, ನಿಷ್ಠೆ ಮತ್ತು ಕ್ರೀಡಾ ಕ್ಷೇತ್ರದ ಸೇವೆಗೈದ ಬದ್ಧತೆ ಫಲವಾಗಿ ಈ ಗೌರವ ದೊರೆತಿದೆ.
ಸಂಸ್ಥೆಯ ಪರವಾಗಿ ಶ್ರೀ ಪುನೀತ್ ಕೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
Post a Comment