ಸುಬ್ರಹ್ಮಣ್ಯ, ಅ. 8 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದ್ರಜೆ ಅವರು ಇಂದು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪತ್ರಕರ್ತರಿಗೆ ನೀಡುವ ಮಣಿಪಾಲ್ ಉಚಿತ ಆರೋಗ್ಯ ಕಾರ್ಡ್ ಅನ್ನು ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಅವರು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡು ತೋಟ ಅವರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಹೆಗಡೆ ಮತ್ತು ಮಣಿಪಾಲ್ ಆರೋಗ್ಯ ಕಾರ್ಡ್ ಮೇಲ್ವಿಚಾರಕ ಕಾರ್ತಿಕ್ ಉಪಸ್ಥಿತರಿದ್ದರು.
ನಂತರ ಶ್ರೀನಿವಾಸ್ ನಾಯಕ್ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶ್ರೀಗಳು ಎಲ್ಲರನ್ನು ಶಾಲು ಹೊದಿಸಿ ಮಂತ್ರಾಕ್ಷತೆ ನೀಡಿ ಗೌರವಿಸಿದರು.
Post a Comment