ಯುವಕ ನಾಪತ್ತೆ ಪ್ರಕರಣ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೆಲಸಕ್ಕೆ ಹೋಗುತ್ತೇನೆ ಎಂದು ಮನೆ ಬಿಟ್ಟಿದ್ದ ಯುವಕ ನಾಪತ್ತೆ.


ಕಡಬ
: ಶಾಮಿಯಾನದ ಕೆಲಸಕ್ಕೆಂದು ಹೋದ ಯುವಕನೋರ್ವ ಮನೆಗೆ ಬಾರದೆ ಕಾಣೆಯಾಗಿದ್ದು ಕಡಬ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಬಿಳಿನೆಲೆ ಗ್ರಾಮದ ಮುಂಗ್ಲಿ ನಿವಾಸಿ ಶಾಂತಪ್ಪ ಎಂಬವರ ಮಗ ಸಂದೀಪ್ ( ವ 30) ಕಾಣೆಯಾದ ಯುವಕ.
ಮರ್ದಾಳದಲ್ಲಿ ವಿನಯ ಎಂಬವರಿಗೆ ಸೇರಿದ ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈತ ನ.27 ರಂದು ಕೆಲಸಕ್ಕೆ ಬಂದು ಸಾಯಂಕಾಲ ನೆಟ್ಟಣದ ಪ್ರತೀಕ್ ಎಂಬಾತನ ಜೊತೆ ಕಾರಲ್ಲಿ ಹೋಗಿರುವುದಾಗಿ ಶಾಮಿಯಾನ ಮಾಲಕರರು ಮನೆಯವರಿಗೆ ತಿಳಿಸಿದ್ದಾರೆ.
ಕಾಣೆಯಾದ ತನ್ನ ಮಗನನ್ನು ಹುಡುಕಿಕೊಡುವಂತೆ ತಾಯಿ ಸರೋಜ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ