ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ದಿನಾಂಕ 01/112024 ರಂದು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ಎನ್ ವಹಿಸಿದರು. ಕೆ ಎಸ್ ಎಸ್ ಕಾಲೇಜಿನ ಕಚೇರಿ ಸಿಬ್ಬಂದಿ ಸುಬ್ರಹ್ಮಣ್ಯ ಕೆ ಉದ್ಘಾಟಿಸಿ, ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಅರ್ಪಿಸಿದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಶಾಂತ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅನ್ವಿತಾ ಅವರು ಹಚ್ಚೇವು ಕನ್ನಡದ ದೀಪ ಹಾಡನ್ನು ಹಾಡಿದರು.ಕನ್ನಡ ವಿಭಾಗದ ಮುಖ್ಯಸ್ಥ ಉದಯ ಕುಮಾರ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಸುಮಿತ್ರ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಕಲ್ಪನಾ ವಂದಿಸಿದರು.

Post a Comment

Previous Post Next Post