ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಭೇಟಿ


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ಭೇಟಿ ನೀಡಿದರು. 

ಈ ಸಂದರ್ಭ ದೇವಸ್ಥಾನ ವತಿಯಿಂದ ದೇವಸ್ಥಾನದ ಆನೆ ಯಶಸ್ವಿನಿ ಇದ್ದು ಬ್ಯಾಂಡ್ ವಾಲಗದೊಂದಿಗೆ ಸ್ವಾಗತಿಸಲಾಯಿತು.
 ಕಾಶಿಕಟ್ಟೆಯಿಂದ ಮೆರವಣಿಗೆಯಲ್ಲಿ ಕರೆ ತರಲಾಯಿತು. ರಾಜಗೋಪುರ ಬಳಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿದರು. 
 ಶ್ರೀಗಳು ದೇವಾಲಯದಲ್ಲಿ ದರ್ಪಣ ತೀರ್ಥ ನದಿಗೆ ತೆರಳಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ದೇವಸ್ಥಾನದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Post a Comment

أحدث أقدم