ಸುಬ್ರಹ್ಮಣ್ಯ ರೋಟರಿ ಕ್ಲಬ್ ನಿಂದ ಕುಟುಂಬ ಸಮ್ಮಿಲನ ಹಾಗೂ ಮಾಹಿತಿ ಕಾರ್ಯಕ್ರಮ.


ಸುಬ್ರಹ್ಮಣ್ಯ ನ.24: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ಏನೇ ಕಲ್ಲು ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ರೋಟರಿ ಕ್ಲಬ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ಬಂದ ದಾರಿ ಹಾಗೂ ಅದರ ಸಂಪೂರ್ಣ ಮಾಹಿತಿ ಕಾರ್ಯಕ್ರಮ ನಡೆಯಿತು.
ರೋಟರಿ ಜಿಲ್ಲೆ 31 81 ರ ಪೂರ್ವ ಜಿಲ್ಲಾ ಕಾರ್ಯದರ್ಶಿ ಹಾಗೂ ತರಬೇತುದಾರರಾದ ಮೈಸೂರಿನ ಕೆ.ಎಂ. ಹರೀಶ್ ಅವರು ಅಂತರರಾಷ್ಟ್ರೀಯ ರೋಟರಿ ಸಂಸ್ಥೆ ಹುಟ್ಟಿ ಬೆಳೆದು ಬಂದ ದಾರಿ, ಅದರ ಧ್ಯೇಯ, ಉದ್ದೇಶಗಳು, ಕಾರ್ಯನಿರ್ವಹಣೆ, ಜವಾಬ್ದಾರಿಗಳು, ಸಮಾಜಕ್ಕೆ ನೀಡುವಂತ ಸೇವಾ ಚಟುವಟಿಕೆಗಳು, ಇವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿರುವರು.
 ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು .ವೇದಿಕೆಯಲ್ಲಿ ಬೆಳ್ಳಾರೆ ರೋಟರಿ ಕ್ಲಬ್ಬಿನ ಅಧ್ಯಕ್ಷ ಚಂದ್ರಶೇಖರ ರೈ, ವಲಯ ಐದರ ಸಹಾಯಕ ಗವರ್ನರ್ ವಿನಯಕುಮಾರ್ ,ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡು ತೋಟ ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ಬಿನ ಅಧ್ಯಕ್ಷ ಶೃತಿ ಮಂಜುನಾಥ್, ನಿಕಟ ಪೂರ್ವ ಅಧ್ಯಕ್ಷ ಪ್ರಶಾಂತ್ ಕೋಡಿಬೈಲು, ಕಾರ್ಯದರ್ಶಿ ಭವಾನಿ ಶಂಕರ ಪೈಲಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಬೆಳ್ಳಾರೆ ರೋಟರಿ ಕ್ಲಬ್ಬಿನ ಪದಾಧಿಕಾರಿಗಳು ಸದಸ್ಯರು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಪೂರ್ವ ಅಧ್ಯಕ್ಷರುಗಳು ಪದಾಧಿಕಾರಿಗಳು ಸದಸ್ಯರು ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ನ ಸದಸ್ಯರುಗಳು ಹಾಜರಿದ್ದರು.

Post a Comment

Previous Post Next Post