ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು.


ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ದಿನಾಂಕ 04/11/2024 ರಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೂಪ ಜೆ ರೈ ಅತಿಥಿಯಾಗಿದ್ದರು. ಕನ್ನಡ ಭಾಷಣ, ಆಶುಭಾಷಣ, ಸಮೂಹ ಗೀತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಉದಯಕುಮಾರ ಪ್ರಸಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಸಂಜನಾ ನಿರೂಪಿಸಿ, ಕನ್ನಡ ಸಂಘದ ನಾಯಕ ಪ್ರತೀಕ್ ವಂದಿಸಿದರು.

Post a Comment

Previous Post Next Post