ಭಾರತದ T20 ಕ್ರಿಕೆಟ್ ತಂಡದ ನಾಯಕ ಹಾಗೂ ಪ್ರಸಿದ್ಧ ಕ್ರಿಕೆಟ್ ಆಟಗಾರ.ಸೂರ್ಯಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ಬೇಟಿ.


ಕುಕ್ಕೆ ಸುಬ್ರಮಣ್ಯ; ನ,19,ಭಾರತದ T20 ಕ್ರಿಕೆಟ್ ತಂಡದ ನಾಯಕ ಹಾಗೂ ಪ್ರಸಿದ್ಧ ಕ್ರಿಕೆಟ್ ಆಟಗಾರ.ಸೂರ್ಯಕುಮಾರ್ ಯಾದವ್ ಹಾಗೂ ಧರ್ಮಪತ್ನಿ ದೇವಿಶಾ ದಂಪತಿ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಸೇವೆಯನ್ನು ಸಲ್ಲಿಸಿದ್ದಾರೆ. 

ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಮಣ್ಯ ಮಠದಲ್ಲಿ ಆಶ್ಲೇಷ ಬಲಿ ಸೇವೆ, ಹಾಗೂ ನಾಗ ಪ್ರತಿಷ್ಠಾಪನ ಪೂಜೆಯನ್ನು ಸಲ್ಲಿಸಿದ್ದಾರೆ. 
ನಮ್ಮ ಭಾರತ ದೇಶದ ಟಿ 20 ಕ್ರಿಕೆಟ್ ತಂಡದ ಅದ್ಭುತ ಆಟಗಾರ 360 ಎಂದೇ ಹೆಸರುವಾಸಿಯಾಗಿರುವ ಪ್ರಸಿದ್ಧ ಆಟಗಾರ ಸೂರ್ಯ ಕುಮಾರ್ ಯಾದವ್ ಅವರು ದಂಪತಿ ಸಮೇತರಾಗಿ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಸೇವೆಯನ್ನು ಸಲ್ಲಿಸಿದ ನಂತರ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ದಂಪತಿಗಳನ್ನು ಶಾಲು ಹೊದಿಸಿ ವಿಶೇಷವಾಗಿ ಗೌರವಿಸಲಾಯಿತು.
 ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಶಾಲು ಹೊದಿಸಿ ಗೌರವಿಸಿದರು. ಎ. ಇ .ಓ ಯೇಸುರಾಜ್ ಹಾಗೂ ದೇವಸ್ಥಾನದ ಸಿಬ್ಬಂದಿ ಗಳು ಉಪಸ್ಥಿತರಿದ್ದರು.

Post a Comment

Previous Post Next Post