ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ.ಡಿ .29 ರಂದು ನಡೆಯಲಿದೆ.

ಸುಬ್ರಹ್ಮಣ್ಯ ಡಿ.13: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ತುಮಕೂರು, ನೇತ್ರಾವತಿ ವಲಯ ಮಂಗಳೂರು ವತಿಯಿಂದ ಡಿಸೆಂಬರ್ 29ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ರಥ ಬೀದಿಯಲ್ಲಿ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ನಡೆಯಲಿರುವುದು .ಈ ಯೋಗ ಶಿಬಿರದಲ್ಲಿ ರಾಜ್ಯಾದ್ಯಂತ ಸುಮಾರು 3000 ಯೋಗ ಬಂಧುಗಳು ಭಾಗವಹಿಸಲಿರುವರೆಂದು ಸಂಘಟಕರು ತಿಳಿಸಿರುತ್ತಾರೆ.

Post a Comment

أحدث أقدم