ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ.

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ 
ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ ಬೆಲ್ಲ ಮತ್ತು ಕಡ್ಲೆಬೆಳೆಯಿಂದ ಧರ್ಮಾಧಿಕಾರಿಗಳ ಮುಂದೆ ತುಳ ಭಾರ ಸೇವೆ ಮಾಡಿಸಿದರು. 
ಸಚಿವರ ಭೇಟಿ ವೇಳೆ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು DCF ಶ್ರೀಕಾಂತ್ ಖಣದಾಳಿ
ಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ