ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ರಾಜೀವ್ ಗಾಂಧಿ ಸೇವಾ ಕೇಂದ್ರ ಕುಮಾರಧಾರ ಸಭಾಭವನದಲ್ಲಿ.
ಡಿ .12,ಗುರುವಾರದಂದು ಗ್ರಾಮ ಆರೋಗ್ಯ ಕುರಿತು ಒಂದು ದಿನದ ಮುಖಾ-ಮುಖಿ ತರಬೇತಿ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಎಚ್.ಎಲ್. ವೆಂಕಟೇಶ್ ರವರು ತರಬೇತಿ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ನಾರಾಯಣ ಎನ್.ಎಸ್. ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ತರಬೇತಿ ಕಾರ್ಯಕ್ರಮದ ಕೇಂದ್ರ ಬಿಂದು ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಪ್ರಮೀಳಾ ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ ಇವರು ಸಂಪೂರ್ಣವಾಗಿ ಆರೋಗ್ಯ ಮಾಹಿತಿ ತರಬೇತಿ ನೀಡಿರುತ್ತಾರೆ. ಇನ್ನೋರ್ವೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಮಹಿಳಾ ಮೇಲ್ವಿಚಾರಕರು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸುಳ್ಯ ಇವರು ಬಾಲ್ಯ ವಿವಾಹದ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿರುತ್ತಾರೆ. ಸಭಾ ವೇದಿಕೆಯಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಾದ ಶ್ರೀಮತಿ ಭಾಗ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಾದ ಶ್ರೀಮತಿ ತಾರಾ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಶ್ರೀಮತಿ ನವ್ಯಾ & ಶ್ರೀಮತಿ ಶಾಂತರವರು ಉಪಸ್ಥಿತರಿದ್ದರು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲೀಜನ್ ಏರಿಯಾ-D& ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಇದರ ಸದಸ್ಯರು-ಕಡಬ ತಾಲೂಕು ಗಮಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಗ್ರಾಮಸ್ಥರು-ಹಿರಿಯರು-ಮಾರ್ಗದರ್ಶಕರು ಮತ್ತು ನಿವೃತ್ತ ಪ್ರಾಂಶುಪಾಲರು ಆದ ಶ್ರೀ ಎಮ್.ಬಿ.ಅಶೋಕ್ ಕುಮಾರ್ ಮೂಲೆಮಜಲುರವರು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶ್ನೋತ್ತರ ವೇಳೆಯಲ್ಲಿ ಚರ್ಚಿಸಿ ಕೆಲವೊಂದು ಸೂಕ್ತ ಸಲಹೆ-ಸೂಚನೆಗಳನ್ನು ನೀಡಿರುತ್ತಾರೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತು ವ್ಯಾಪ್ತಿಗೊಳಪಟ್ಟ ಎಲ್ಲಾ ಅಂಗನವಾಡಿ ಕೇಂದ್ರಗಳ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಅಧ್ಯಕ್ಷರು-ಪದಾಧಿಕಾರಿಗಳು-ಸದಸ್ಯರುಗಳು, ಗ್ರಂಥಾಲಯ ಮೇಲ್ವಿಚಾರಕರು, ಆರೋಗ್ಯ ಕಾರ್ಯಪಡೆಯ ಸದಸ್ಯರುಗಳು, ವಿವಿಧ ಸಮಾಜಮುಖಿ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸದ್ರಿ ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀ ಮೋನಪ್ಪ.ಡಿ. ಇವರು ನಿರೂಪಿಸಿ ಎಲ್ಲರನ್ನೂ ಸ್ವಾಗತಿಸಿ ವಂದಿಸಿದರು.
إرسال تعليق