ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಮಾಜಶಾಸ್ತ್ರ ವಿಭಾಗದಿಂದ, ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವತಿಯಿಂದ ದಿನಾಂಕ 2.12.2024 ರಂದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇಲ್ಲಿನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು, ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಸಮಾಜಶಾಸ್ತ್ರದ ಉಪನ್ಯಾಸಕಿ ಜಕೀನಾ, ಮಹಾವಿದ್ಯಾಲಯದ ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ, ಉಪನ್ಯಾಸಕಿ ಆರತಿ, ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಮನೋಹರ ವಿದ್ಯಾರ್ಥಿಗಳಿಗೆ, ಪ್ರಸ್ತುತ ಸಮಾಜದಲ್ಲಿ ಸಮಾಜಶಾಸ್ತ್ರದ ಮಹತ್ವವನ್ನು ತಿಳಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಬಹುಮಾನವನ್ನು ವಿತರಿಸಿಸಿಹಿ ತಿಂಡಿಯನ್ನು ವಿದ್ಯಾರ್ಥಿಗಳಿಗೆ ಹಂಚಲಾಯಿತು.

Post a Comment

أحدث أقدم