ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಕುಮಾರಪಾದಕ್ಕೆ ಪೂಜೆ.

 ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರ ಪಾದಕ್ಕೆ ಮತ್ತು ಸಮೀಪದಲ್ಲಿರುವ ವಾಸುಕಿಗೆ ಸಂಪ್ರದಾಯದಂತೆ ಡಿ.21 ಪೂಜೆ ನೆರವೇರಿಸಲಾಯಿತು. 
   ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ವೇ|ಮೂ। ಸೀತಾರಾಮ ಯಡಪಡಿತ್ತಾಯ ಅವರು ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಮಾರ್ಗಶಿರ ಬಹುಳ ಷಷ್ಠಿಯ ದಿನದಂದು ಪಂಚಾಮೃತ ಅಭಿಷೇಕ ನೆರವೇರಿಸಿ ಪೂಜೆ ನೆರವೇರಿಸಿದರು. 
 ಕುಕ್ಕೆ ಸುಬ್ರಹ್ಮಣ್ಯದಿಂದ ಸುಮಾರು 12 ಕಿ.ಮೀ. ದೂರವಿರುವ ಎತ್ತರದ ಪರ್ವತ ಏರಿ ಪೂಜೆಯಲ್ಲಿ ಭಕ್ತರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ವರ್ಷಕ್ಕೊಂದು ಬಾರಿ ಮಾತ್ರವೇ ಇಲ್ಲಿ ದೇವಸ್ಥಾನದ ವತಿಯಿಂದ ಪೂಜೆ ನೆರವೇರಿಸಲಾಗುತ್ತದೆ. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು, ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

Previous Post Next Post