ಸುಬ್ರಹ್ಮಣ್ಯ, ಡಿ.1: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲೇ ಕಾಡಾನೆ ಓಡಾಟ ನಡೆಸಿದ ಘಟನೆ ಭಾನುವಾರ ಸಂಜೆ ವೇಳೆ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ದೇವರಗದ್ದೆ ಅರಣ್ಯ ಪ್ರದೇಶ ಭಾಗದಿಂದ ಬಂದ ಒಂಟಿ ಕಾಡಾನೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯಾಸಮಂದಿರ ಬಳಿಯಿಂದ ಸುಬ್ರಹ್ಮಣ್ಯ ಮಠದ ಸಮೀಪದ ಮೂಲಕ ಸಂಚರಿಸಿ, ಮತ್ತೆ ಅರಣ್ಯ ಭಾಗಕ್ಕೆ ತೆರಳಿದೆ. ಕಾಡಾನೆ ವ್ಯಾಸಮಂದಿರದ ಸಮೀಪದಿಂದ ಹಾದು ಹೋಗುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಕಾಡಾನೆ ಕೆಲ ಹೊತ್ತು ದೇವಳದ ಸಮೀಪದ ಪರಿಸದಲ್ಲಿ ಸಂಚರಿಸಿ ಕಾಡಿನತ್ತ ತೆರಳಿದೆ.
إرسال تعليق