ಕುಕ್ಕೆ ಸುಬ್ರಮಣ್ಯ; ಡಿ,3, ಕುಕ್ಕೆ ಸುಬ್ರಮಣ್ಯ ಶ್ರೀ ಕ್ಷೇತ್ರದಲ್ಲಿ ಸುಮಾರು ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಪಾನ್ ಪರಾಗ್, ಮಧು, ಮಾರುತಿ, ಕೂಲ್ ಲಿಪ್ ಬೇರೆ ಬೇರೆ ರೀತಿಯ ತಂಬಾಕು ಉತ್ಪನ್ನಗಳನ್ನು ಹಾಗೂ ನಿಷೇಧಿತ ಪ್ಲಾಸ್ಟಿಕ್ ಗಳನ್ನು ಮಾರಾಟ ಮಾಡುತ್ತಿದ್ದಾರೆ,
ಎಂಬ ಖಚಿತ ಮಾಹಿತಿ ಮೇರೆಗೆ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿಗಳು, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ದೇವಸ್ಥಾನದ ಸಿಬ್ಬಂದಿಗಳು ಸುಬ್ರಮಣ್ಯ ಪೊಲೀಸ್ ಇಲಾಖೆ ದಾಳಿ ನಡೆಸಿ ತಂಬಾಕು ಉತ್ಪನ್ನಗಳನ್ನು ಹಾಗೂ ನಿಷೇಧಿತ ಪ್ಲಾಸ್ಟಿಕ್ ಗಳನ್ನು
ಕುಕ್ಕೆ ಸುಬ್ರಹ್ಮಣ್ಯ ದೇವಳದ ಪರಿಸರದಲ್ಲಿ ಇಲ್ಲಿಯೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಮಾಡಿದರೆ, ಮುಂದಿನ ದಿನಗಳಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ವರ್ತಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ತಾಲೂಕು ಆರೋಗ್ಯ ಅಧಿಕಾರಿ ನಂದಕುಮಾರ್, ಸುಬ್ರಮಣ್ಯ ವೈದ್ಯಾಧಿಕಾರಿ ತ್ರಿಮೂರ್ತಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ , ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ, ಸುಬ್ರಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷೆ ಲಲಿತಾಗುಂಡಡ್ಕ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ,ಸಂಜೀವಿನಿ ಒಕ್ಕೂಟ ಸದಸ್ಯರು ದಾಳಿ ಸಂದರ್ಭದಲ್ಲಿ ಇದ್ದರು.
إرسال تعليق