ಪುತ್ತೂರು ಉಪ ವಿಭಾಗದ ನೂತನ ಪ್ರೊಬೇಷನರಿ ಸಹಾಯಕ ಆಯುಕ್ತರು ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್.

ದಕ್ಷಿಣ ಕನ್ನಡ; ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರ ವರ್ಗಾವಣೆಯಿಂದ  ತೆರವಾಗಿರುವ ಸ್ಥಾನಕ್ಕೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಅವರು ಪ್ರಭಾರ ವಹಿಸಿಕೊಂಡಿದ್ದಾರೆ.

ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ 

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಳೆದ ಜೂನ್ 1ರಿಂದ ಕರ್ತವ್ಯದಲ್ಲಿರುವ ಪಿ.ಶ್ರವಣ್ ಕುಮಾರ್ ಅವರು 2023ನೇ ಬ್ಯಾಚ್‌ ನ ಐಎಎಸ್ ಅಧಿಕಾರಿಯಾಗಿದ್ದಾರೆ. 2023ರಲ್ಲಿ ಐಎಎಸ್‌ ಗೆ ಆಯ್ಕೆಯಾಗಿರುವ ಇವರು ರಾಯಚೂರಿನ ಕಲ್ಲೂರು ಗ್ರಾಮದವರು.

ಬೆಂಗಳೂರಿನ ಆರ್.ವಿ.ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್ ಪದವಿ ಪಡೆದುಕೊಂಡಿರುವ  ಇವರು ಆ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದರು. ಭಾರತೀಯ ರಕ್ಷಣಾ ಇಲಾಖೆಯ ರಾಜ್ಯ ಸೇವೆಯಲ್ಲಿ ತರಬೇತಿಯನ್ನೂ ಪಡೆದುಕೊಂಡಿದ್ದರು.  ಇದಕ್ಕೂ ಮೊದಲು ಅವರು ಐಆರ್‌ಎಸ್‌ನಲ್ಲಿ ಸೇವೆ ಸಲ್ಲಿಸಿದ್ದರು.

ನಿರ್ಗಮಿತ  ಸಹಾಯಕ ಆಯುಕ್ತರು ನೂತನ ಆಯುಕ್ತರಿಗೆ  ಅಧಿಕಾರ ಹಸ್ತಾಂತರಿಸಿದರು. ಜುಬಿನ್ ಮೊಹಪಾತ್ರ ಅವರನ್ನು ರಾಯಚೂರು ನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ.


Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ