ಈ ಘಟನೆಯಲ್ಲಿ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ . ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಅವರು ಈ ರಸ್ತೆಯಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ
ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.
ಈ ವೇಳೆ ರಸ್ತೆಯ ಅಂಚಿನಲ್ಲಿರುವ ಮರಗಳನ್ನು ತೆಗೆಯುವಂತೆ ಸ್ಥಳೀಯರು ಆಗ್ರಹಿಸಿದ್ದು, ಆದರೇ ಆ ವೇಳೆ ಕೇವಲ ಎರಡು ಮರಗಳನ್ನು ತೆರವುಗೊಳಿಸಿ ಜನರ ಕಣ್ಣಿಗೆ ಮಣ್ಣೇರಚ್ಚುವ ಕಾರ್ಯ ಅರಣ್ಯ ಇಲಾಖೆ ಮಾಡಿತ್ತು ಎಂಬ ಆರೋಪ ಆಗ ಕೇಳಿ ಬಂದಿತ್ತು. ಈ ಆರೋಪಕ್ಕೆ ಪುಷ್ಟಿ ನೀಡುವಂತೆ ಇಂದಿನ ಘಟನೆ ನಡೆದಿದೆ.
ಇಂದಿನ ಘಟನೆಯಲ್ಲಿ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ,ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುವ ಯಶವಂತ ಎಂಬವರು ಗಾಯಗೊಂಡಿದ್ದಾರೆ. ಎಂದಿನಂತೆ ಪಿಗ್ಮಿ ಕಲೆಕ್ಷನ್ ಗೆಂದು ಅವರು ತಮ್ಮ ದ್ವಿ ಚಕ್ರ ವಾಹನದಲ್ಲಿ ಸಂಜೆ ವೇಳೆ ಸಂಚರಿಸುತ್ತಿದ್ದಾಗ ಅಪಘಾತ ನಡೆದಿದೆ. ಅವರು ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ನಡೆದಿದೆ.
Post a Comment