ಸುಪ್ರಸಿದ್ಧ ಗಾಯಕಿ ಶ್ರೀಮತಿ ಎಸ್ ಜಾನಕಿ ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಭೇಟಿ.


ಕುಕ್ಕೆ ಸುಬ್ರಮಣ್ಯ; ಫೆ.20,
ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಯಸ್.ಜಾನಕಿ ಯವರು ಈದಿನ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು. ಇವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತಿಯ ಸದಸ್ಯ ಹರೀಶ ಇಂಜಾಡಿಯವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

Post a Comment

أحدث أقدم