ಸುಬ್ರಹ್ಮಣ್ಯ ಫೆ5: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳ ವಿದ್ಯಾರ್ಜನೆಯಲ್ಲಿ ಅತ್ಯುನ್ನತ ಅಂಕ ಪಡೆದವರಿಗೆ ರೂ. 10000 /=ಗಳ ದತ್ತಿ ನಿಧಿಯನ್ನು ನೀಡಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಚಂದ್ರಶೇಖರ್ ನಾಯರ್ ದತ್ತಿ ನಿಧಿಯನ್ನು ಶಾಲಾ ಮುಖ್ಯೋಪಾಧ್ಯಾಯ ಮಾಧವ ಮೂಕಮಲೆ ಅವರಿಗೆ ಹಸ್ತಾಂತರಿಸಿದರು. ಮುಖ್ಯ ಅತಿಥಿಗಳಾಗಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡು ತೋಟ ,ಪೂರ್ವ ಅಧ್ಯಕ್ಷರುಗಳಾದ ಗೋಪಾಲ ಎಣ್ಣೆ ಮಜಲ್, ಮಾಯಿಲಪ್ಪ ಸಂಕೇಶ ,ಜೊತೆ ಕಾರ್ಯದರ್ಶಿ ಭವಾನಿ ಶಂಕರ ಪೈಲಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ ದವರು ವಿದ್ಯಾರ್ಥಿಗಳು ಹಾಜರಿದ್ದರು. ಗೋಪಾಲ್ ಎಣ್ಣೆ ಮಜಲ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಚಂದ್ರಶೇಖರ್ ನಾಯರ್ ಸ್ವಾಗತಿಸಿ ಭವಾನಿ ಶಂಕರ ಪೈಲಾಜೆ ಧನ್ಯವಾದ ಸಮರ್ಪಿಸಿದರು.
Post a Comment