ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ದಿನಾಂಕ 25.3.2025 ರಂದು ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮವನ್ನು ಕೆ.ಎಸ್.ಎಸ್ ಕಾಲೇಜಿನ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್ ಉದ್ಘಾಟಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ಪದವಿಯ ಸಹ ಪ್ರಾಧ್ಯಾಪಕರಾದ ಡಾ. ಅಕ್ಷತಾ ಕಾರಂತ ಅವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಬಗ್ಗೆ ತರಬೇತಿಯನ್ನು ನೀಡಿದರು.
ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ ಹಾಗೂ ವಲಯದ ಸಹ ಸಂಯೋಜನಾಧಿಕಾರಿಯಾದ ಪ್ರೊ. ರಾಮಕೃಷ್ಣ ಕೆ ಎಸ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಸುಳ್ಯ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ಅತ್ಯುತ್ತಮ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಯನ್ನು ಪಡೆದ ಶ್ರೀಮತಿ ಚಿತ್ರಲೇಖ ಕೆ ಎಸ್ ಅವರನ್ನು ಸನ್ಮಾನಿಸಲಾಯಿತು. ಪದವಿ ಕಾಲೇಜುಗಳಾದ ನೆಲ್ಯಾಡಿ, ಬೆಳ್ಳಾರೆ, ಸುಳ್ಯ, ನೆಹರು ಮೆಮೋರಿಯಲ್ ಕಾಲೇಜ್, ವಿದ್ಯಾರಶ್ಮಿ ಕಾಲೇಜ್ ಸವಣೂರು ಅಲ್ಲಿಯ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳು ಮತ್ತು ಎನ್. ಎಸ್. ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಡಬ -ಸುಳ್ಯ
ವಲಯದ ಎನ್ ಎಸ್ ಎಸ್ ಸಂಯೋಜನಾಧಿಕಾರಿ ಆರತಿ ಕೆ ಸ್ವಾಗತಿಸಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಸುಮಿತ್ರ ವಂದಿಸಿದರು. ಸಂಖ್ಯಾ ಮತ್ತು ಅಂಕಿತ ನಿರೂಪಿಸಿದರು

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ