ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ದಿನಾಂಕ ಮಾ,08, ಶನಿವಾರದಂದು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ದೀಪ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಯಿತು. ಈ ಕಾರ್ಯಕ್ರಮದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಕಿರಿಯ ವಿದ್ಯಾರ್ಥಿಗಳಾದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಜವಾಬ್ದಾರಿಯ ಸಂಕೇತವಾಗಿ ದೀಪಗಳನ್ನು ಹಸ್ತಾಂತರಿಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಯುತ ಶಿವಪ್ರಸಾದ್ ಉಜಿರೆ, ಸಾಮರಸ್ಯ ಸಂಯೋಜಕರು ಮಂಗಳೂರು ವಿಭಾಗ, ಖ್ಯಾತ ಮೃದಂಗವಾದಕರಾದ ವಸಂತಕೃಷ್ಣ ಕಾಂಚನ ಹಾಗೂ ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿಗಳಾದ ಶ್ರೀಯುತ ಮೂಲ ಚಂದ್ರಕಾಂಚನ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಯುತ ಸುಬ್ರಾಯ ಪುಣಚ ಹಾಗೂ ಶಾಲಾ ಮುಖ್ಯ ಗುರುಗಳಾದ ಶ್ರೀಯುತ ಗಣೇಶ ವಾಗ್ಲೆ ಅವರು ಉಪಸ್ಥಿತರಿದ್ದರು. ಶ್ರೀಯುತ ಶಿವಪ್ರಸಾದ್ ರವರು ತಮ್ಮ ವಿದ್ಯಾರ್ಥಿ ಜೀವನ ಹಾಗೂ ತಮ್ಮ ವೃತ್ತಿಯ ಸಂದರ್ಭದಲ್ಲಿ ನಡೆದಂತಹ ಕೆಲವೊಂದು ಸನ್ನಿವೇಶಗಳನ್ನು ವಿದ್ಯಾರ್ಥಿಗಲ್ಲಿ ಹಂಚಿಕೊಂಡು ವಿದ್ಯಾರ್ಥಿ ಗಳಿಗೆ ಶುಭಾಶಯಗಗಳನ್ನು ಕೋರಿದರು. ಹತ್ತನೇ ತರಗತಿಯ ವಿದ್ಯಾರ್ಥಿಗಳು ತಾವು ಶಾಲೆಯಲ್ಲಿ ಕಳೆದಂತಹ ಸುಂದರ ಕ್ಷಣಗಳನ್ನು ಹಂಚಿಕೊಂಡು ಅನಿಸಿಕೆಯನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿ ಹರ್ಷವರ್ಧನ್ ಒಂದು ಪ್ರೇರಣಾ ಗೀತೆಯನ್ನು ಹಾಡಿದರು. ಶಾಲಾ ಶಿಕ್ಷಕಿಯಾದ ಸೂರ್ಯ ಮಾತಾಜಿಯವರು ವಿದ್ಯಾರ್ಥಿಗಳ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ಶುಭ ಹಾರೈಸಿದರು. ಶ್ರೀಯುತ ಮೂಲಚಂದ್ರಕಾಂಚನಾ ಇವರು ಅಧ್ಯಕ್ಷೀಯ ಭಾಷಣವನ್ನು ಮಾಡಿದರು. ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಆರತಿಯನ್ನು ಬೆಳಗಿ ಶುಭ ಹಾರೈಸಿದರು. ಪ್ರೌಢ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು, ಶಾಲೆಯ ಎಲ್ಲಾ ಶಿಕ್ಷಕರು ಹಾಜರಿದ್ದರು. ಶ್ರೀಮತಿ ಭಾಗೀರಥಿ ಮಾತಾಜಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಶಾಲಾ ಮುಖ್ಯ ಗುರುಗಳಾದ ಶ್ರೀಯುತ ಗಣೇಶ್ ವಾಗ್ಲೇ ಅವರು ವಿದ್ಯಾರ್ಥಿಗಳಿಗೆ ಶುಭ ಹಾರ ಹಾರೈಸಿ ಧನ್ಯವಾದವಿತ್ತರು. ಶ್ರೀಮತಿ ಕಾವ್ಯ ಮಾತಾಜಿಯವರು ಕಾರ್ಯಕ್ರಮವನ್ನು ನಿರೂಪಿಸಿದರು.
ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ದೀಪ ಪ್ರಧಾನ ಕಾರ್ಯಕ್ರಮ.
Newspad
0
Premium By
Raushan Design With
Shroff Templates
إرسال تعليق