ಪುತ್ತೂರು ತಾಲ್ಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಏಪ್ರಿಲ್ 4ರ ಬೆಳಿಗ್ಗೆ ಭಯಾನಕ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಹರ್ಷ (24) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, 12 ಪ್ರಯಾಣಿಕರಿಗೆ ಗಾಯಗಳಾಗಿವೆ.
ಮೃತ ಹರ್ಷ ಯಡಿಯೂರು, ಬೆಂಗಳೂರು ನಿವಾಸಿಯಾಗಿದ್ದು, ಸ್ನೇಹಿತರೊಂದಿಗೆ ಮುಲ್ಕಿಗೆ ತೆರಳುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. ಗಾಯಗೊಂಡವರ ಪೈಕಿ 11 ಮಂದಿಯನ್ನು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬನನ್ನು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ಸು ಪಲ್ಟಿಯಾದ ಕಾರಣಕ್ಕಾಗಿ ಮುಂದಿನ ತನಿಖೆ ನಡೆಯುತ್ತಿದೆ.
إرسال تعليق