ಕೆಎಸ್‌ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶ (IQAC) ಸಹಯೋಗದಲ್ಲಿ, ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ವತಿಯಿಂದ ದಿನಾಂಕ 21-04-2025 ರಂದು ದತ್ತಿ ನಿಧಿ ಸ್ಥಾಪನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ, ಬೆಂಗಳೂರು ಘಟಕವನ್ನು ಸ್ಥಾಪಿಸಿದ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ. ರಂಗಯ್ಯ ಶೆಟ್ಟಿಗಾರ್ ಅವರು ಮಾತನಾಡಿ, ಈ ಘಟಕವು ಉದ್ಯೋಗ ಅವಕಾಶ, ಉಚಿತ ಬಸ್ ಪಾಸ್, ಅಧ್ಯಯನ ಪ್ರವಾಸ ಹಾಗೂ ವಿದ್ಯಾರ್ಥಿಗಳಿಗೆ ಧನಸಹಾಯದಂತಹ ಹಲವಾರು ಸಹಾಯಧನಗಳನ್ನು ಒದಗಿಸುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಘಟಕದ ಅಧ್ಯಕ್ಷ ಹಾಗೂ ಎಸ್ ಎಲ್ ಆರ್ ಮೆಟಾಲಿಕ್ಸ್ ಲಿಮಿಟೆಡ್‌ನ ಜನರಲ್ ಮೆನೇಜರ್ ಪುರುಷೋತ್ತಮ ಆಲ್ಕಬೆ, ಗೌರವ ಕಾರ್ಯದರ್ಶಿ ಮತ್ತು ಪ್ರಗತಿ ಗ್ರೂಪ್ ಆಫ್ ಕಂಪೆನೀಸ್‌ನ ಲಯಸನಿಂಗ್ ಆಫೀಸರ್ ಧನಂಜಯ ಕಶ್ಯಪು, ಖಜಾಂಜಿ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ರಾಧಾಕೃಷ್ಣ, ಸಮಿತಿ ಸದಸ್ಯ ಹಾಗೂ ಶ್ರೀಲಕ್ಷ್ಮೀ ಜನಾರ್ದನ ಇಲೆಕ್ಟ್ರಿಕಲ್ಸ್‌ನ ಮಾಲೀಕ ದಾಮೋದರ ಎ. ಶೆಟ್ಟಿ ಇವರುಗಳು ಉಪಸ್ಥಿತರಿದ್ದು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಪೂರ್ವ ವಿದ್ಯಾರ್ಥಿ ಸಂಘದ ನಿಕಟ ಪೂರ್ವ ಅಧ್ಯಕ್ಷೆ ಶ್ರೀಮತಿ ವಿಮಲ ರಂಗಯ್ಯ, ಪ್ರಸ್ತುತ ಅಧ್ಯಕ್ಷ ಚಂದ್ರಶೇಖರ್ ನಾಯರ್ ಹಾಗೂ IQAC ಸಂಯೋಜಕಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗ

Post a Comment

Previous Post Next Post