600 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಮಾರಂಭ.

ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 2025ನೇ ಸಾಲಿನ SSLC ಪರೀಕ್ಷೆಯಲ್ಲಿ 600 ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಮೇ 8, 2025, ಗುರುವಾರದಂದು ಕೌಕ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಮಾರಂಭದಲ್ಲಿ ಧನ್ವಿ ಶೆಟ್ಟಿ (ದೋಂತಿಲ), ಕೆ. ನಿರೀಕ್ಷಾ (ಕುಡಲಾ, ಇಂಚಲಂಪಾಡಿ) ಸೇರಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವದ ಸನ್ಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಲೋಕೇಶ್ ಬಾಣಜಾಲ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲ್, ಉಪಾಧ್ಯಕ್ಷ ರವಿ ಹೊಸವಕ್ಲು, ಪದ್ಮನಾಭ ಶೆಟ್ಟಿ (ದೋಂತಿಲ), ನೆಲ್ಯಾಡಿ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಹೇಮಂತ್ ಕುಮಾರ್ (ದೋಂತಿಲ), ಬೂತ್ ಸಮಿತಿ ಅಧ್ಯಕ್ಷ ವಿಶ್ವನಾಥ ಕಾಂತು (ಪಳಿಕೆ), ಗ್ರಾಮ ಪಂಚಾಯತ್ ಉಪಾಧ್ಯಕ್ಷ ವನಿತಾ, ಮಾಜಿ ಉಪಾಧ್ಯಕ್ಷ ಭವಾನಿ, ಸದಸ್ಯ ಸವಿತಾ (ಹೊಸಮನೆ) ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ದೇವಿಕಾ ಮುಂತಾದವರು ಉಪಸ್ಥಿತರಿದ್ದರು.
"ಇದು ಶ್ಲಾಘನೀಯ ಕಾರ್ಯ," ಎಂದು ಮಾತನಾಡಿದ ಮಾಜಿ ಅಧ್ಯಕ್ಷ ಲೋಕೇಶ್ ಬಾಣಜಾಲ್, "ಈ ರೀತಿಯ ಪ್ರೋತ್ಸಾಹಗಳು ಇತರ ಗ್ರಾಮ ಪಂಚಾಯತ್ ಗಳಿಗೂ ಮಾದರಿಯಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಹಾರೈಸುತ್ತೇನೆ," ಎಂದು ಶುಭ ಹಾರೈಸಿದರು.

Post a Comment

أحدث أقدم