ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ನಾಲ್ವರಿಗೆ ಗಾಯ






ಕಡಬ
, ಮೇ 25 – ಸುಬ್ರಹ್ಮಣ್ಯ–ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ರವಿವಾರ ಭಾರೀ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಚಾಲಕನೊಂದಿಗೆ ಇಬ್ಬರು ಮಹಿಳೆಯರು ಮತ್ತು ಮಗು ಸೇರಿ ನಾಲ್ವರು ಗಾಯಗೊಂಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು (ಕೆಎ 14 ಎಂಬಿ 0226) ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಬಂದಾಗ ರಸ್ತೆ ಬದಿಯಲ್ಲಿದ್ದ ಮರ ಆಕಸ್ಮಿಕವಾಗಿ ಕಾರಿನ ಮೇಲೆ ಬಿದ್ದುದು. ಪರಿಣಾಮವಾಗಿ ಕಾರಿನಲ್ಲಿದ್ದವರು ಸಿಲುಕಿಕೊಂಡು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಧುಮುಕಿ, ಗಾಯಾಳುಗಳನ್ನು ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದವರ ಪ್ರಕಾರ, ಗಾಯಾಳುಗಳಿಗೆ ಮುಖ ಮತ್ತು ಕೈ–ಕಾಲುಗಳಿಗೆ ತೀವ್ರ ರಕ್ತಗಾಯಗಳಾಗಿವೆ. ಈ ಘಟನೆ ಕೆಲಕಾಲ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿತು. ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳೀಯರು ಮರ ತೆರವಿಗೆ ಸಹಕಾರ ನೀಡಿದ್ದಾರೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ