ಹಾಸನದ ಮಹಿಳೆಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ.

ಸುಬ್ರಹ್ಮಣ್ಯ, ಮೇ 11: ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ.
  ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ, ಪತ್ತೆ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.
  ಗೀತಾ ಅವರು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡು ದಿನದ ಹಿಂದೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ‌. ಕೌಟಂಬಿಕ ಮನಸ್ಥಾಪದಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮನೆಯವರು ವಿವಿಧೆಡೆ ಹುಡುಕಾಟ ನಡೆಸಿ, ಪೊಲೀಸ್ ಮಾಹಿತಿಯಂತೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

Previous Post Next Post