ದಿನಾಂಕ 15.06.2025 ರಂದು ರಾತ್ರಿ ಸುಮಾರು 11.30 ಗಂಟೆ ವೇಳೆಗೆ ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಹಿಟಾಚಿ ಯಂತ್ರವನ್ನು ಲೋಡ್ ಮಾಡಿಕೊಂಡು ಸಾಗುತ್ತಿದ್ದ ಲಾರಿ (ನೋಂದಣಿ ಸಂಖ್ಯೆ KA 01 AL 0766)ಗೆ, ಕಾರ್ಕಳ - ಧರ್ಮಸ್ಥಳ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಸುಗಮ ಬಸ್ (ನೋಂದಣಿ ಸಂಖ್ಯೆ KA 51 AJ 0779) ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಕಾರ್ಕಳ ನಿವಾಸಿ ಶಂಕರ ನಾರಾಯಣ ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳೀಯರಿಂದ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳೂರು ಎ ಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇನ್ನು ಬಸ್‌ನಲ್ಲಿದ್ದ ಇತರ ಎಂಟುಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ನಂತರ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ. ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ಮುಂದಿನ ತನಿಖೆ ನಡೆಸಲಾಗುತ್ತಿದೆ.
Post a Comment