ಬೆಳ್ಳಾರೆ, ಜೂನ್ 21: ಕೆಪಿಎಸ್ ಶಾಲೆ ಬೆಳ್ಳಾರೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ನಿವೃತ್ತಿ ಹೊಂದಿದ ಅಕ್ಷರ ದಾಸೋಹ ಸಿಬ್ಬಂದಿಗೆ ಸನ್ಮಾನ ಹಾಗೂ ಬಿಳ್ಕೊಡುಗೆ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, “ಇಂದಿನ ವಿದ್ಯಾರ್ಥಿಗಳು ಪಠ್ಯ ಜ್ಞಾನಕ್ಕಷ್ಟೇ ಸೀಮಿತವಾಗದೆ ನೈತಿಕ ಮೌಲ್ಯಗಳುಳ್ಳ ನಾಗರಿಕರಾಗಿ ಬೆಳೆದಾಗ ಮಾತ್ರ ಸಮೃದ್ಧ ಸಮಾಜ ನಿರ್ಮಾಣ ಸಾಧ್ಯ. ಶಾಲೆಗಳು ವಿದ್ಯಾರ್ಥಿಗಳ ಭವಿಷ್ಯ ಕಟ್ಟುವ ತಾಣ. ಈ ಶ್ರೇಷ್ಠ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರ ಸೇವೆ ಬಹಳ ಮಾದರಿಯಾಗಿದೆ. ನಿವೃತ್ತರಾಗುತ್ತಿರುವ ಸಿಬ್ಬಂದಿಗಳೆಲ್ಲರಿಗೂ ಮುಂದಿನ ಜೀವನಕ್ಕೆ ಶುಭ ಹಾರೈಕೆಗಳು,” ಎಂದು ತಿಳಿಸಿದರು.
ಈ ಸಮಾರಂಭದಲ್ಲಿ ಶಾಲೆಯ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು, ಮುಖ್ಯ ಅಥಿತಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಾಧಕರಿಗೆ ಸನ್ಮಾನ ನೀಡಲಾಯಿತು. ಸನ್ಮಾನಿತರು ಮತ್ತು ನಿವೃತ್ತ ಅಕ್ಷರ ದಾಸೋಹ ಸಿಬ್ಬಂದಿಗೆ ಶಾಲೆಯ ವತಿಯಿಂದ ಸ್ಮರಣಿಕೆ ಹಾಗೂ ಗೌರವಪತ್ರ ನೀಡಲಾಯಿತು.
Post a Comment