ಕಡಬ, ಜೂನ್ 17 – ದೊಳ್ಪಾಡಿ ಗ್ರಾಮದಲ್ಲಿ ನಿನ್ನೆ ಸಂಭವಿಸಿದ ದುರ್ಘಟನೆಯಲ್ಲಿ ವಿದ್ಯುತ್ ಶಾಕ್‌ಗೆ ಸಿಲುಕಿ ಮೃತಪಟ್ಟ ಜಲಜಾಕ್ಷಿ (ರೇಖಾ) ಅವರ ಮನೆಗೆ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇಂತಹ ಅನಾಹುತಗಳು ಪುನರಾವೃತವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಶಾಸಕಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು ಕುಟುಂಬಕ್ಕೆ ಸರ್ಕಾರದ ಪರವಾಗಿ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ವಿಶ್ವನಾಥ ಕೊಪ್ಪ, ಚಾರ್ವಾಕ ಸಿ. ಎ ಬ್ಯಾಂಕ್ ಅಧ್ಯಕ್ಷ ಶ್ರೀ ಗಣೇಶ್ ಉದನಡ್ಕ, ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶ್ರೀ ಶಿವರಾಮ ಡಿ. ಹೆಚ್, ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ರಾಮಣ್ಣ ಜಾಲ್ತಾಡು, ಕಾಣಿಯೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ರಘು ಎನ್. ಬಿ ಹಾಗೂ ಸಿಬ್ಬಂದಿ, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸ್ಥಳೀಯರಾದ ಜನತೆ ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿ, ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಲಿ ಎಂದು ಆಗ್ರಹಿಸಿದ್ದಾರೆ.
إرسال تعليق