ಕೊಂಬಾರು, ಜೂನ್ 21: ಕೊಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೌರಿಪಲ್ಲ ಎಂಬಲ್ಲಿ ಸುಮಾರು ₹16 ಲಕ್ಷ ವೆಚ್ಚದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಘನತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನೆಯನ್ನು ಇಂದು ವಿಜೃಂಭಣೆಯಿಂದ ನೆರವೇರಿಸಲಾಯಿತು.
ಉದ್ಘಾಟನಾ ಸಮಾರಂಭದಲ್ಲಿ ಪಂಚಾಯತ್ ಅಧ್ಯಕ್ಷ ಮಧುಸೂದನ್ ಕೊಂಬಾರು, ಪಂಚಾಯತ್ ಸದಸ್ಯರು, ಇಂಜಿನಿಯರ್ ಭರತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO), ತಾಲ್ಲೂಕು ಪಂಚಾಯತ್ ಅಧಿಕಾರಿಗಳು, ಹಾಗೂ ಸ್ಥಳೀಯ ಪ್ರಮುಖರಾದ ವಾಡ್ಯಪ್ಪ ಗೌಡ, ಉಮೇಶ್ ಸೇರಿದಂತೆ ಊರಿನ ಅನೇಕ ಮಂದಿ ಉಪಸ್ಥಿತರಿದ್ದರು.
ಗ್ರಾಮೀಣ ಪರಿಸರದ ಸ್ವಚ್ಛತೆ ಹಾಗೂ ತಂತ್ರಜ್ಞಾನ ಆಧಾರಿತ ತ್ಯಾಜ್ಯ ನಿರ್ವಹಣೆಗೆ ಇದು ಮುನ್ನಡೆಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟರು.
Post a Comment