ಸುಬ್ರಹ್ಮಣ್ಯ, ಜೂನ್ 20 – ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಮತ್ತು ಸೌಕರ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮಿಷಿನ್ ಹಸ್ತಾಂತರ ಹಾಗೂ ಮಾಹಿತಿ ಕಾರ್ಯಕ್ರಮವು ಗುರುವಾರ ನಡೆಯಿತು.
ಈ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಬೆಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಜಂಟಿಯಾಗಿ ಆಯೋಜಿಸಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹಾಜರಿದ್ದ ಬೆಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಅವರು ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮಿಷಿನ್ ಅನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.
ರೋಟರಿ ಜಿಲ್ಲಾ 3192ರ ಮೆನ್ಸುರಲ್ ಹೆಲ್ತ್ & ಹೈಜೆನ್ ಮ್ಯಾನೇಜ್ಮೆಂಟ್ ಚೇರ್ ಪರ್ಸನ್ ಸೌಮ್ಯ ಶ್ರೀಕಾಂತ್ ಅವರು ಸ್ಯಾನಿಟರಿ ಪ್ಯಾಡ್‌ಗಳ ಬಳಕೆ, ಮಹತ್ವ ಹಾಗೂ ಆರೋಗ್ಯದ ಬಗ್ಗೆ ವಿದ್ಯಾರ್ಥಿನಿಯರಿಗೆ ವಿವರವಾದ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರೋಟರಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ನಿಯೋಜಿತ ಅಧ್ಯಕ್ಷ ಜಯಪ್ರಕಾಶ್, ಕಾರ್ಯದರ್ಶಿ ಭವಾನಿ ಶಂಕರ ಪೈಲಾಜೆ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸಂಕೀರ್ತ ಹೆಬ್ಬಾರ್, ಶಾಲಾ ಮುಖ್ಯಶಿಕ್ಷಕಿ ವಿದ್ಯಾರತ್ನ ಹಾಗೂ ಪೂರ್ವ ಅಧ್ಯಕ್ಷ ಗೋಪಾಲ ಎಣ್ಣೆ ಮಜಲ್ ಉಪಸ್ಥಿತರಿದ್ದರು. ಗೋಪಾಲ ಎಣ್ಣೆ ಮಜಲ್ ಅವರು ಸ್ವಾಗತಿಸಿ, ಕಾರ್ಯಕ್ರಮ ಅಂತ್ಯದಲ್ಲಿ ಧನ್ಯವಾದದ ಮಾತುಗಳನ್ನು ಹೇಳಿದರು.
Post a Comment