ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶನಿವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಭವ್ಯವಾದ ಸಾಮೂಹಿಕ ಯೋಗ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್, ಸಂಜೀವಿನಿ ಒಕ್ಕೂಟ, ಅರಣ್ಯ ಇಲಾಖೆ, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಇತರ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಅವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಅವರು ಮಾತನಾಡುತ್ತಾ, “ಯೋಗವು ದೇಹ, ಮನಸ್ಸು ಮತ್ತು ಉಸಿರಾಟವನ್ನು ಏಕಾಗ್ರತೆಯೊಂದಿಗೆ ಸಮ್ಮಿಲಿತಗೊಳಿಸುತ್ತಿದೆ. ಇದು ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ. ಪ್ರತಿದಿನ ಯೋಗ ಅಭ್ಯಾಸ ಮಾಡುವ ಮೂಲಕ ಜೀವನ ಶೈಲಿ ಉತ್ತಮಗೊಳ್ಳುತ್ತದೆ,” ಎಂದು ಶಿಫಾರಸು ಮಾಡಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷ ವೆಂಕಟೇಶ್ ಎಚ್ ಎಲ್, ಡಾ. ರವಿ ಕಕ್ಕೆ ಪದವ್ (ಸಮಾಜ ಸೇವಾ ಟ್ರಸ್ಟ್), ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ, ಎಸ್.ಪಿ.ವೈ.ಎಸ್.ಎಸ್. ಶಾಖ ಸಂಚಾಲಕ ಪ್ರಭಾಕರ ಪಡ್ರೆ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರತ್ನ ನೂಚ್ಚಿಲ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಗುರುಗಳು ಹಾಗೂ ಬಳಿಕ ವಿವಿಧ ಇಲಾಖೆಗಳ ಪ್ರತಿನಿಧಿಗಳು ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.
ಯೋಗಾಭ್ಯಾಸದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು.
Post a Comment