ಸುಬ್ರಹ್ಮಣ್ಯ, ಜೂನ್ 27: ಎಸ್‌ಎಸ್‌ಪಿಯು ಕಾಲೇಜಿನ ಸಾಂಸ್ಕೃತಿಕ ಸಂಘ ಹಾಗೂ ಪ್ರತಿಭಾ ದಿನಾಚರಣೆಯು ಶುಕ್ರವಾರ ಬೆಳ್ಳಿಹಬ್ಬ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟನೆಯಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯೆ ವಿಮಲಾ ರಂಗಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅವರು ಮಾತನಾಡುತ್ತಾ, “ಬಾಲ್ಯದೊಳಗಿನ ಸುಪ್ತ ಪ್ರತಿಭೆಗಳನ್ನು ಹೊರತರುವಲ್ಲಿ ಈ ರೀತಿಯ ಪ್ರತಿಭಾ ಪ್ರದರ್ಶನಗಳು ಮಹತ್ವದ ಪಾತ್ರ ವಹಿಸುತ್ತವೆ. ಕಲೆಯು ವಿದ್ಯಾರ್ಥಿಗಳ ಮನಸ್ಸನ್ನು ಪ್ರಫುಲ್ಲಗೊಳಿಸಿ ಪಾಠ್ಯಚಟುವಟಿಕೆಗಳಲ್ಲಿಯೂ ಉತ್ಸಾಹ ತರುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಚಾರ್ಯ ಸೋಮಶೇಖರ ನಾಯಕ್ ವಹಿಸಿದ್ದರು. ಅವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತೆಗೆದು ಸಾರ್ವಜನಿಕ ವೇದಿಕೆಯಲ್ಲಿ ಪ್ರದರ್ಶಿಸಲು ಸಾಂಸ್ಕೃತಿಕ ತಂಡವನ್ನು ರಚಿಸಲಾಗಿದೆ ಎಂದು ಹೇಳಿದರು. "ಕುಕ್ಕೆ ಸೇರಿದಂತೆ ವಿವಿಧ ಕಡೆಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕಾಲೇಜಿನ ತಂಡ ಸಜ್ಜಾಗಿದೆ" ಎಂದೂ ಹೇಳಿದರು.
ಮುಖ್ಯಅತಿಥಿಗಳಾಗಿ ಗ್ರಾ.ಪಂ ಸದಸ್ಯೆ ಭಾರತಿ ದಿನೇಶ್, ಕೆ.ಎಸ್.ಎಸ್ ಕಾಲೇಜಿನ ಉಪನ್ಯಾಸಕ ಉದಯ್ ಕುಮಾರ್ ಹಾಜರಿದ್ದರು.
ಸಾಂಸ್ಕೃತಿಕ ತಂಡದ ಸಂಚಾಲಕಿ ರೆಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸರಕಾರದ ಸಂಚಾಲಕ ಜಯಪ್ರಕಾಶ್ ಆರ್, ಉಪನ್ಯಾಸಕಿ ಸೌಮ್ಯಾ ದಿನೇಶ್, ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಧೃತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಶ್ರುತಿ ಕೆ. ನಿರೂಪಣೆ ನಿರ್ವಹಿಸಿದರು. ಧೃತಿ ಸ್ವಾಗತಿಸಿದರು, ನಿರೀಕ್ಷಾ ವಂದಿಸಿದರು.
ಕಾಲೇಜಿನ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಶ್ರುತಿ ಅಶ್ವತ್ ಮಾರ್ಗದರ್ಶನದಲ್ಲಿ ಕಲಾತ್ಮಕವಾಗಿ ವೇದಿಕೆ ನಿರ್ಮಿಸಿದ್ದರು.
ಪ್ರತಿಭಾ ಪ್ರದರ್ಶನದ ಭಾಗವಾಗಿ ಶುಕ್ರವಾರ 6 ತಂಡಗಳು ಭಾಗವಹಿಸಿದ್ದು, ಶನಿವಾರ ಇನ್ನೂ 4 ತಂಡಗಳು ತಮ್ಮ ಪ್ರತಿಭೆ ತೋರಿಸಲಿವೆ.
إرسال تعليق