ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದರ್ಶನ್ ಅವರನ್ನು ಜಿಲ್ಲಾ ಕಛೇರಿಯಲ್ಲಿ ಇಂದು ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಅಭಿನಂದಿಸಿದರು.
ಈ ಸಂದರ್ಭ ಶ್ರಿಮತಿ ಭಾಗೀರಥಿ ಮುರುಳ್ಯ ಅವರು ಕ್ಷೇತ್ರದ ಕಂದಾಯ ಇಲಾಖೆ ಸಂಬಂಧಿತ ಹಲವು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ವಿಶೇಷವಾಗಿ 94C ಹಕ್ಕುಪತ್ರಗಳ ವಿತರಣೆ ಪ್ರಕ್ರಿಯೆ, ಪ್ಲಾಟಿಂಗ್ ನಿಬಂಧನೆಗಳು, ಭಾಗಸಹ ಅರಣ್ಯ ಪ್ರದೇಶಗಳಿಗೆ ಸಂಬಂಧಿಸಿದ ಸಮಸ್ಯೆಗಳು, ಹಾಗೂ ಬಡವರಿಗೆ ಮನೆ ನಿರ್ಮಾಣಕ್ಕೆ ತೊಂದರೆಯಾಗುತ್ತಿರುವ ಕೆಂಪುಕಲ್ಲು ಮತ್ತು ಮರಳು ಲಭ್ಯತೆ ಕುರಿತು ವಿವರವಾಗಿ ಚರ್ಚೆ ನಡೆಯಿತು.
ಜಿಲ್ಲಾಧಿಕಾರಿಗಳಿಂದ ಈ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಗ್ರಹಿಸಿದರು. ಕ್ಷೇತ್ರದ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತ್ವರಿತ ಪರಿಹಾರ ನೀಡುವ ಭರವಸೆಯನ್ನು ಜಿಲ್ಲಾಧಿಕಾರಿಗಳು ನೀಡಿದರು.
ಈ ಸಂದರ್ಭ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಮುಳಿಯ ಕೇಶವ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ, ಕಾಣಿಯೂರು ಸೊಸೈಟಿ ಅಧ್ಯಕ್ಷ ಗಣೇಶ್ ಉದನಡ್ಕ, ಮಾಜಿ ಗ್ರಾಮಪಂಚಾಯತ್ ಸದಸ್ಯರು ರಾಕೇಶ್ ಮೆಟ್ಟಿನಡ್ಕ ಮತ್ತು ರಾಮಚಂದ್ರ ಎಣಿತಡ್ಕ ಉಪಸ್ಥಿತರಿದ್ದರು.
Post a Comment