ಕೌಕ್ರಾಡಿ ಗ್ರಾಮ ಪಂಚಾಯತ್‌ನಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ.


ಕಡಬ, ಜೂನ್ 21:
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಯೋಗ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಆರೋಗ್ಯ ಮತ್ತು ಯೋಗದ ಮಹತ್ವವನ್ನು ಸಾರಲು ಈ ಕಾರ್ಯಕ್ರಮವೂ ಸಹ ಒಂದು ಮಾದರಿ ಆಯಿತು.

ಈ ಕಾರ್ಯಕ್ರಮದಲ್ಲಿ ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ್ ಕುಮಾರ್ ಗೌಡ ನೇತೃತ್ವ ವಹಿಸಿದ್ದರು. ಅವರ ನೇತೃತ್ವದಲ್ಲಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಲಾಗಿದ್ದು, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಅಧಿಕಾರಿ ಶ್ರೀಮತಿ ದೇವಿಕಾ, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದರು. ಗ್ರಾಮೀಣ ಸಮುದಾಯದ ಹಲವರು ಈ ಕಾರ್ಯಕ್ರಮಕ್ಕೆ ಸಮರ್ಪಕ oddu ತೋರಿಸಿದರು.

ಸ್ಥಳೀಯ ಮಟ್ಟದಲ್ಲಿ ಆಯೋಜಿಸಲಾದ ಈ ರೀತಿಯ ಯೋಗ ಕಾರ್ಯಕ್ರಮಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುವಲ್ಲಿ ಸಹಾಯಕರಾಗುತ್ತವೆ ಎಂದು ಅಧ್ಯಕ್ಷರು ಅಭಿಪ್ರಾಯಪಟ್ಟರು.

Post a Comment

أحدث أقدم