ಕಡಬ ತಾಲೂಕು: ರಾಜ್ಯ ಕಾಂಗ್ರೆಸ್ ಸರಕಾರವು ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಎದುರು ತೀವ್ರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು ಹಾಗೂ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ದೇವಿಕಾರವರ ಮುಖಾಂತರ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬಾಲಕೃಷ್ಣ ಬಾಣಜಾಲ್, ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಗೌಡ, ಭಾಸ್ಕರ್ ಗೌಡ ಇಚಲಂಪಾಡಿ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಗ್ರಾಮ ಪಂಚಾಯತ್‌ಗಳ ಎದುರು ನಡೆಯುತ್ತಿರುವ ಈ ರೀತಿಯ ಪ್ರತಿಭಟನೆಗಳು ಜನಮನ್ನಣೆಗೆ ಪಾತ್ರವಾಗುತ್ತಿವೆ. ಸರ್ಕಾರದ ನೀತಿಗಳ ವಿರುದ್ಧ ಜನಮನದ ಮಾತು ಈ ಮೂಲಕ ಹೊರಹೊಮ್ಮುತ್ತಿದೆ ಎಂಬ ಅಭಿಪ್ರಾಯವನ್ನು ಬಿಜೆಪಿ ಮುಖಂಡರು ವ್ಯಕ್ತಪಡಿಸಿದ್ದಾರೆ
Post a Comment