ಪುತ್ತೂರು, ಜೂನ್ 29, 2025:
ವೈಯುಕ್ತಿಕ ವಿಷಯಕ್ಕೆ ಸಂಬಂಧಿಸಿದಂತೆ ಎಕ್ಸ್ (ಹಿಂದಿನ ಟ್ವಿಟರ್) ಪ್ಲಾಟ್‌ಫಾರ್ಮ್‌ನಲ್ಲಿ ಒಬ್ಬ ವ್ಯಕ್ತಿ ಅಶ್ಲೀಲ ಹಾಗೂ ಅಸಂಬಂಧಿತ ವಿಷಯದ ಪೋಸ್ಟ್ ಅನ್ನು ಶೇರ್ ಮಾಡಿದ ಪ್ರಕರಣದ ಕುರಿತಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಘಟನೆಗಳು, ಧರ್ಮಗಳು ಹಾಗೂ ರಾಜಕೀಯ ಪಕ್ಷಗಳ ನಡುವೆ ವೈಮನಸ್ಸು ಉಂಟುಮಾಡುವ, ಸಾರ್ವಜನಿಕ ಶಾಂತಿ ಹಾಗೂ ನೆಮ್ಮದಿಗೆ ಭಂಗ ಉಂಟುಮಾಡುವ ರೀತಿಯ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವುದು ತನಿಖೆ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.
ಈ ಸಂಬಂಧಿಸಿದಂತೆ ದಿನಾಂಕ 29-06-2025 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025ರಂತೆ, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂಗಳು 296, 196(1)(a), ಮತ್ತು 353(2) ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಪ್ರಾರಂಭಿಸಲಾಗಿದೆ.
ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿ ಸಂಗ್ರಹಿಸಿ, ಆರೋಪಿಯ ಗುರುತು ಮತ್ತು ತಂತ್ರಜ್ಞಾನ ಆಧಾರದ ಮೇಲೆ ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Post a Comment