ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ – ಮಾದಕ ವಸ್ತು ಸೇವನೆ ಪ್ರಕರಣ ದಾಖಲು.

ಪುತ್ತೂರು, ಜೂನ್ 8: ಬಂಟ್ವಾಳ ತಾಲ್ಲೂಕಿನ ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ದಿನಾಂಕ 07-06-2025 ರಂದು ರಾತ್ರಿ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿವಿ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಸಾರ್ವಜನಿಕ ರಸ್ತೆಯ ಬಳಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವುದು ಕಂಡುಬಂದಿದ್ದು, ಅವರನ್ನು ತಕ್ಷಣ ವಿಚಾರಣೆ ನಡೆಸಲಾಯಿತು. ಸಂಶಯಾಸ್ಪದವಾಗಿ ನಡೀತಿದ್ದ ಈ ಇಬ್ಬರಲ್ಲಿ ಮಾದಕ ವಸ್ತು ಸೇವನೆ ಸಂಬಂಧ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಅವರನ್ನು ತಕ್ಷಣವೇ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಎದುರು ತಪಾಸಣೆಗೆ ಒಳಪಡಿಸಲಾಯಿತು.

ವೈದ್ಯಕೀಯ ಪರೀಕ್ಷೆಯಲ್ಲಿ ಅವರಲ್ಲಿ ಒಬ್ಬನಾದ ಬಂಟ್ವಾಳದ ಕೆದಿಲ ನಿವಾಸಿ ಮೊಹಮ್ಮದ್ ಖಲಂದರ್ ಶಾಫಿ (24) ಎಂಬವರು ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 44/2025, NDPS Act 1985 ರ ಸೆಕ್ಷನ್ 27(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪುತ್ತೂರು ನಗರ ಪೊಲೀಸ್ ಠಾಣೆ ಈ ಬಗ್ಗೆ ತನಿಖೆ ನಡೆಯುತ್ತಿದೆ.

Post a Comment

أحدث أقدم