ಸುಳ್ಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಹತ್ತನೇ ತರಗತಿಯಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಂದು ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಬ್ರೀಜೇಶ್ ಚೌಟ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಅವರು ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಿ ಮಾತನಾಡುತ್ತಾ, “ಶಿಕ್ಷಣವೆಂಬ ಶಕ್ತಿ ಬಳಸಿ ಸಮಾಜದಲ್ಲಿ ನಿಸ್ವಾರ್ಥ ಸೇವೆಯ ಮಾದರಿಯಾಗಬೇಕು” ಎಂಬ ಸಂದೇಶ ನೀಡಿದರು.
ಸಮಾರಂಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ, ಸುಂದರ ಭಾರತ ಸಂಸ್ಥೆಯ ಮುಖ್ಯಸ್ಥ ಪ್ರತಾಪ್ B.O ಕೃಷ್ಣಪ್ಪ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಕಾಲೇಜು ಪ್ರಾಂಶುಪಾಲರಾದ ಮೋಹನ ಬೊಮ್ಮೆಟ್ಟಿ ಸೇರಿದಂತೆ ಹಲವಾರು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಹಪಾಠಿಗಳಿಗೆ ಪ್ರೇರಣೆಯಾಗಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿ ಬದುಕಿನಲ್ಲಿ ಹೊಸ ದೃಷ್ಟಿಕೋನ ತಂದೊಡುತ್ತವೆ ಎಂದು ಕಾಲೇಜು ಅಧಿಕಾರಿಗಳು ಅಭಿಪ್ರಾಯಪಟ್ಟರು.
Post a Comment