ಉಪ್ಪಿನಂಗಡಿ: ಇತ್ತೀಚೆಗಷ್ಟೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ “Maikala trolls” ಹೆಸರಿನ ಖಾತೆ ಬಳಸಿ ಕೆಲವು ದುಷ್ಕರ್ಮಿಗಳು ಕೋಮುವಾದವನ್ನು ಉದ್ದುಡಿಸುವ ಬಗೆಯ ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸಿದ್ದಾರೆ.
ಇವುಗಳಿಂದಾಗಿ ಸಮುದಾಯಗಳ ನಡುವೆ ದ್ವೇಷ ಹುಟ್ಟುವ ಹಾಗೂ ಕಾನೂನು ಸುವ್ಯವಸ್ಥೆಗೆ ತೊಂದರೆ ಉಂಟಾಗುವ ಸಾಧ್ಯತೆಗಳು ಕಂಡುಬಂದ ಹಿನ್ನಲೆಯಲ್ಲಿ, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಿನಾಂಕ 02.06.2025 ರಂದು ಅ.ಕ್ರ: 47/2025ರಂತೆ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 353(2), 55 ಹಾಗೂ 103 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Post a Comment