ಬಂಟ್ವಾಳ, ಜೂನ್ 2 – ಧನುಷ್ ಎಂಬವರು, ಕುರಿಯಾಳ ಗ್ರಾಮದ ನಿವಾಸಿ, ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನೊಂದಿಗೆ ತೆಗೆದ ಫೋಟೋವನ್ನು ಹಂಚಿಕೊಂಡಿದ್ದರು. ಈ ಫೋಟೋವನ್ನು ದುರುಪಯೋಗಪಡಿಸಿಕೊಂಡು, “Troll Abraham”, “Maikala Troll” ಹಾಗೂ “ಕರಾವಳಿ ಒಫಿಶಿಯಲ್” ಎಂಬ ಇನ್‌ಸ್ಟಾಗ್ರಾಂ ಪೇಜ್‌ಗಳಲ್ಲಿ ಪಿರ್ಯಾದಿದಾರರ ಮೇಲೆ ಕೋಮುದ್ವೇಷ ಹುಟ್ಟಿಸುವ ಹಾಗೂ ಅವರನ್ನು ಕೊಲೆ ಪ್ರಕರಣದ ಆರೋಪಿಯಾಗಿ ಬಿಂಬಿಸುವ ರೀತಿಯಲ್ಲಿ ಪೋಸ್ಟ್‌ಗಳನ್ನು ಪ್ರಕಟಿಸಲಾಗಿದೆ.
ಈ ಸಂಬಂಧ ಪಿರ್ಯಾದಿದಾರರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಕ್ಷಣವೇ ಪೊಲೀಸರು ಎಫ್ಐಆರ್ ಸಂಖ್ಯೆ 61/2025ರಂತೆ IPC ಸೆಕ್ಷನ್ 353(1)(B) ಮತ್ತು 353(2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈಗಾಗಲೇ ತನಿಖೆ ಪ್ರಾರಂಭವಾಗಿದ್ದು, ಜವಾಬ್ದಾರರಾಗಿರುವ ಖಾತೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿ ವ್ಯಕ್ತಿತ್ವ ಹಾನಿಯಾಗುವಂತಹ ಪೋಸ್ಟ್‌ಗಳು ಹಾಗೂ ಕೋಮುದ್ವೇಷ ಭಾವನೆ ಉಂಟುಮಾಡುವ ನಡವಳಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದ್ದು, ಇಂಥ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂಬುದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
Post a Comment