ಪುತ್ತೂರು:ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 135/2017 ಕಲಂ 379, 420 ಐಪಿಸಿ ಪ್ರಕರಣದಲ್ಲಿ ಸುಮಾರು ಐದು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತನನ್ನು ಔರಾನ್ ಅಲಿಯಾಸ್ ರಿಯಾಜ್ (33), ಬೇಲೂರು, ಹಾಸನ ಜಿಲ್ಲೆ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಜಾರಿ ಮಾಡುತ್ತಿದ್ದರೂ ಹಾಜರಾಗದೇ ತಲೆಮರೆಸಿಕೊಂಡಿದ್ದನು.
ದಿನಾಂಕ 24-07-2025 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಕೌಶಿಕ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿ ಹೆಚ್ ಸಿ 685 ಪ್ರಶಾಂತ್ ರೈ, ಸಿಪಿಸಿ 2283 ಶ್ರೀಶೈಲ ಎಂ.ಕೆ, ಸಿಪಿಸಿ 2404 ಮಹಮ್ಮದ್ ಮೌಲಾನಾ ಅವರು ಹಾಸನ ಜಿಲ್ಲೆಯ ಬೇಲೂರು ಪ್ರದೇಶದಲ್ಲಿ ಆರೋಪಿ ರಿಯಾಜ್ ನನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
إرسال تعليق