2011ನೇ ಸಾಲಿನಲ್ಲಿ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಕ್ರ. 35/2011 ಸಂಖ್ಯೆಯ ಪ್ರಕರಣವು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳು 143, 147, 148, 447, 448, 504, 323, 324, 326, 354, 506, 307, 427 R/w 149 IPC ಅಡಿಯಲ್ಲಿ ದಾಖಲಾಗಿತ್ತು.
ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಿ ಮೂಡ ಗ್ರಾಮದ ನಿವಾಸಿ ಅಕ್ಬರ್ ಸಿದ್ದಿಕ್ ಎಂಬಾತನು, ಜೂನ್ 30ರಂದು ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಆತನನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ನ್ಯಾಯಾಲಯ ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳ ಕಾರ್ಯ ಸಾರ್ವಜನಿಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.
Post a Comment