ಕೊಲೆ ಪ್ರಕರಣದಲ್ಲಿ ಬಂಧಿತರಾದ ಇಬ್ಬರ ಜಾಮೀನು ಅರ್ಜಿ ತಿರಸ್ಕಾರ


ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ಮಾನ್ಯ ಜಿಲ್ಲಾ ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

2025ರ ಮೇ 27ರಂದು ದಾಖಲಾಗಿದ್ದ ಅ.ಕ್ರ 54/2025ರಲ್ಲಿ ಬಂಟ್ವಾಳ ನಿವಾಸಿ ಅಭಿನ್ ರೈ (32) ಹಾಗೂ ಶೃಂಗೇರಿ ನಿವಾಸಿ ರವಿ ಸಂಜಯ್ (29) ಎಂಬವರನ್ನು ಪೊಲೀಸರು ದಸ್ತಗಿರಿಸಿದ್ದರು. ಆರೋಪಿಗಳು ಜಾಮೀನು ಪಡೆದುಕೊಳ್ಳಲು ನ್ಯಾಯಾಲಯದ ಮೊರೆ ಹೋಗಿದ್ದರೂ, ವಿಚಾರಣೆ ನಡೆಸಿದ ನ್ಯಾಯಾಲಯವು ಜುಲೈ 15ರಂದು ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಸ್ತುತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ತನಿಖೆ ಇನ್ನೂ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲ: ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ

Post a Comment

Previous Post Next Post