ಬೆಳ್ತಂಗಡಿ, ಜುಲೈ 2, 2025 –
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ, ಅಕ್ರಮವಾಗಿ ಜಾನುವಾರಿನ ಮಾಂಸವನ್ನು ಶೇಖರಿಸಿ ಮಾರಾಟಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಪೊಲೀಸರ ಪ್ರಕಾರ, ಅಬ್ದುಲ್ ರಜಾಕ್ (28) ಮತ್ತು ಅಬ್ದುಲ್ ರವೂಪ್ (20) – ಇಬ್ಬರೂ ಮಲವಂತಿಗೆ ಗ್ರಾಮದ ನಿವಾಸಿಗಳು, ತಮ್ಮ ಅಂಗಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಒಟ್ಟು 47 ಕೆಜಿ ದನದ ಮಾಂಸವನ್ನು ಪ್ರಿಡ್ಜ್‌ನಲ್ಲಿ ಶೇಖರಿಸಿಟ್ಟಿರುವುದನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಉಪ-ನಿರೀಕ್ಷಕ ಯಲ್ಲಪ್ಪ ಹೆಚ್ ಮಾದರ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ನಡೆಸಿದ ತನಿಖೆಯಲ್ಲಿ ಪತ್ತೆಹಚ್ಚಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಇಬ್ಬರೂ ಸಹೋದರರು ತಮ್ಮ ಮನೆಯಲ್ಲಿಯೇ ಸಾಕಿದ್ದ ಜಾನುವಾರನ್ನು ವಧೆ ಮಾಡಿ, ಮಾಂಸ ಮಾರಾಟ ಮಾಡಲು ಸಂಚು ರೂಪಿಸಿದ್ದುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ಸಂಖ್ಯೆ 51/2025, ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರ ಕಲಂ 4 ಮತ್ತು 12 ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
إرسال تعليق