ಬೆಂಗಳೂರು:
ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಶ್ರದ್ಧಾಪೂರ್ವಕವಾಗಿ ಭೇಟಿ ನೀಡಿ ಗೌರವಿಸಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರು, ದೇವಸ್ಥಾನದ ಪರವಾಗಿ ಉಪಮುಖ್ಯಮಂತ್ರಿ ಅವರನ್ನು ಹೂಗುಚ್ಛ ನೀಡಿ, ಶಾಲು ಹೊದಿಸಿ, ಹಾರ ಹಾಕಿ ಗೌರವಿಸಿದರು. ಈ ವೇಳೆ ಅವರು ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಸಮರ್ಪಕ ಸಹಕಾರ ನೀಡಬೇಕು ಎಂಬ ಮನವಿಯನ್ನು ಸಲ್ಲಿಸಿದರು.
ಹಾಗೂ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ವತಃ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬೇಟಿ ನೀಡಿ ಸ್ಥಳೀಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಬೇಕೆಂದು ಕೂಡ ಮನವಿ ಮಾಡಲಾಯಿತು.
ಉಪಮುಖ್ಯಮಂತ್ರಿ ಭೇಟಿಯ ನಂತರ ಅಧ್ಯಕ್ಷರು ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದರು,
“ಶ್ರೀ ಕ್ಷೇತ್ರ ಸುಬ್ರಹ್ಮಣ್ಯವು ಲಕ್ಷಾಂತರ ಭಕ್ತರ ನಂಬಿಕೆಯ ಕೇಂದ್ರವಾಗಿದೆ. ಇಲ್ಲಿ ಇನ್ನುಷ್ಟು ಮೂಲಸೌಕರ್ಯ, ಸೌಲಭ್ಯಗಳ ಅಗತ್ಯವಿದೆ. ದೇವಸ್ಥಾನದ ಅಭಿವೃದ್ಧಿ ಹಾಗೂ ಭಕ್ತರಿಗೆ ಉತ್ತಮ ಅನುಭವ ನೀಡುವ ದೃಷ್ಟಿಯಿಂದ ರಾಜ್ಯ ಸರ್ಕಾರದ ಸಹಕಾರ ಅತ್ಯಂತ ಅಗತ್ಯ. ಇದರ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಾವು ಭೇಟಿ ಮಾಡಿ, ಸಹಕಾರ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಅವರು ಸ್ವತಃ ಕ್ಷೇತ್ರಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿಕೊಂಡಿದ್ದೇವೆ ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯಾಗಬೇಕು ರಾಜ್ಯ ಸರಕಾರ ಸರಕಾರ ಮಟ್ಟದಲ್ಲಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಹಕಾರ ಮಾಡುತ್ತಾರೆ ಎಂಬ ನಮ್ಮ ವಿಶ್ವಾಸ ನನಗೆ ಇದೆ ಎಂದು ಅಧ್ಯಕ್ಷರು ತಿಳಿಸಿದರು.”
ಈ ಭೇಟಿಯ ಸಂದರ್ಭದಲ್ಲಿ ಸುಳ್ಯ ನ್ಯಾಯವಾದಿಗಳಾದ ವೆಂಕಪ್ಪಗೌಡ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು. ಕ್ಷೇತ್ರದ ಪರವಾಗಿ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಹ ಅಂತೆಯೇ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಲಾಗಿರುವುದಾಗಿ ಅಧ್ಯಕ್ಷರು ಮಾಹಿತಿ ನೀಡಿದರು.
إرسال تعليق